
ದಾವಣಗೆರೆ : ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕರವೇ ಜಿಲ್ಲಾ ಘಟಕದಿಂದ ಶುಕ್ರವಾರ ರಕ್ತ ಬರೆದು ಚಳವಳಿ ನಡೆಸಲಾಯಿತು. ನಗರದ ಅಕ್ಕಮಹಾದೇವಿ ರಸ್ತೆಯ ಗುರುಭವನದಲ್ಲಿ ಸೇರಿದ ಕಾರ್ಯಕರ್ತರು ಪತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿದ್ದಾರೆ.
ದಾವಣಗೆರೆ ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ಮಾತನಾಡಿ, ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ಸಂದರ್ಭದಲ್ಲಿ ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿ 9 ದಿನ ಕಳೆದಿದ್ದು, ಈವರೆಗೂ ಬಿಡುಗಡೆ ಮಾಡಿರುವುದು ಖಂಡನೀಯ ಎಂದರು. ಸರ್ಕಾರ ತಕ್ಷಣ ರೈತಪರ ಹಾಗೂ ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಮತ್ತು ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರದ ಆದೇಶದಂತೆ ಶೇ.60% ಕನ್ನಡ ನಾಮಫಲಕ ಹಾಗೂ ಜಾಹೀರಾತು ಫಲಕ ಹಾಕಬೇಕೆಂದು ಮಹಾನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿದರು. ಗೋಪಾಲ್ ದೇವರಮನಿ, ತನ್ವೀರ್, ಜಬಿವುಲ್ಲಾ, ಆಟೋ ರಫೀಕ್, ಜಿ.ಎಸ್.ಸಂತೋಷ್, ಸುರೇಶ್, ಗುರುಮೂರ್ತಿ, ಸಂಜು, ದಾದಾಪೀರ್, ರವಿಕುಮಾರ್, ಖಾದರ್ ಬಾಷಾ ಎಟ್.