
ಬಾಗಲಕೋಟ: ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಶ್ರೀ ಮುತ್ತು.ಯ.ವಡ್ಡರ ಇವರಿಗೆ ಹುನಗುಂದ ತಾಲೂಕಿನ ತಾಲೂಕ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಈ ದಿನ ನೀಡಿ ಗೌರವಿಸಲಾಗಿದೆ.
ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಸಾಹಿತ್ಯದಲ್ಲಿ ಕೂಡ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಹಲವಾರು ಸಾಹಿತ್ಯ ವೇದಿಕೆಗಳಲ್ಲಿ ನಡೆಯುವ ಪ್ರತಿನಿತ್ಯದ ಕವನ ಸ್ಪರ್ಧೆಗಳಲ್ಲಿ ಭಾಗವಹಿಸಿ ಸುಮಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಕಥೆ ಕವನ ಲೇಖನಗಳನ್ನು ಪ್ರತಿನಿತ್ಯ ಹಲವಾರು ಪತ್ರಿಕೆಗಳಲ್ಲಿ ಬರೆದು ಪ್ರಕಟಿಸಿದ್ದಾರೆ. ಇವರ ಸಾಹಿತ್ಯ ಕಲೆ ಸೇವೆಯನ್ನು ಗುರುತಿಸಿ ಹುನಗುಂದ ತಾಲೂಕಿನ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾನ್ಯ ಹುನಗುಂದ ಶಾಸಕರಾಗಿರುವ ಶ್ರೀವಿಜಯಾನಂದ ಕಾಶಪ್ಪನವರ ಹಾಗೂ ಹಲವಾರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಪ್ರಶಸ್ತಿ ಸ್ವೀಕರಿಸಿದ ಶ್ರೀ ಮುತ್ತು ವಡ್ಡರ ಅವರಿಗೆ ಗುರು ಬಳಗ,ಸ್ನೇಹ ಬಳಗ, ಕುಟುಂಬ ವರ್ಗದವರು ಹಾಗೂ ಊರಿನ ಗುರುಹಿರಿಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.