ಕೃಷ್ಣ ಜನ್ಮಾಷ್ಟಮಿಯಂದು ಮಹಾಭಾರತದ ಕೃಷ್ಣ ಎಂಬ ವ್ಯಕ್ತಿತ್ವದ ಸುತ್ತ………..
ಎಂತಹ ಅತ್ಯದ್ಭುತ ಪಾತ್ರವದು, ಸಾಹಿತ್ಯಿಕವಾಗಿ ಇರಬಹುದು, ವ್ಯಾವಹಾರಿಕವಾಗಿ ಇರಬಹುದು, ಕಾಲ್ಪನಿಕವಾಗಿ ಇರಬಹುದು ಅಥವಾ ವ್ಯಕ್ತಿತ್ವದ ದೃಷ್ಟಿಯಿಂದ ಇರಬಹುದು. ಸರಿಸುಮಾರು ಪರಿಪೂರ್ಣ ಎಂಬ ಅಭಿಪ್ರಾಯ ಮೂಡಿಸುವ ಪಾತ್ರವದು……. ಅರಿಷಡ್ವರ್ಗಗಳು, ನವ ರಸಗಳು, ಅರವತ್ನಾಲಕ್ಕು ವಿದ್ಯೆಗಳು ಸೇರಿ ಎಲ್ಲಾ ರೀತಿಯ ಅನುಭವಗಳು ಅದರಲ್ಲಿ ಅಡಕವಾಗಿದೆ…