
ಬುದ್ಧ, ಬಸವ, ಅಂಬೇಡ್ಕರ್, ಅವರನ್ನು ದೇವರಂದರೆ ತಪ್ಪಿಲ್ಲ ಎಂದು ಹೈಕೋರ್ಟ್ ಹೇಳಿದೆ. ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾದ ಸದಸ್ಯರು ಸಂವಿಧಾನ ವಿರುದ್ಧ ಪ್ರಮಾಣ ವಚನ ಸ್ವೀಕರಿಸಿದ್ದಾರೆಂದು ಆಕ್ಷೇಪಿಸಿ, ಬೆಳಗಾವಿಯ ಭೀಮಪ್ಪ ಗಡಾದ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಜಾ ಮಾಡುವಾಗ ಕೋರ್ಟ್ ಸ್ಪಷ್ಟನೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್, ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಮೇಲಿನಂತೆ ಹೇಳಿದೆ.