ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ನಾಲ್ಕು ಮತ್ತು ಅರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೇ ತಿಂಗಳ 29 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದ್ದು ಈ ಹಿನ್ನಲೆಯಲ್ಲಿ ಇದೇ ದಿನದಂದು ನಿಗದಿಯಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ನಾಲ್ಕು ಮತ್ತು ಆರನೇ ಸೆಮಿಸ್ಟರ್ ಪದವಿ ಪರೀಕ್ಷೆಗಳನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದೂಡಲಾಗಿದೆ.

ಈ ವಿಷಯಗಳಿಗೆ ನಡೆಸಲಾಗುವ ಪರೀಕ್ಷೆ ದಿನಾಂಕವನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.