ಸವದತ್ತಿ: ಕೈಗಾರಿಕಾ ಬೆಳವಣಿಗೆಯಿಂದ ಉದ್ಯಮಗಳನ್ನು ಆರಂಭಿಸಿ, ಜನರಿಗೆ ಕೆಲಸ ಅಥವಾ ಆದಾಯ ಕೊಡುವ ಕ್ರಿಯೆ. ಉದ್ಯೋಗ ಸೃಷ್ಟಿಯು ದೇಶದ ಆರ್ಥಿಕ ಬೆಳವಣಿಗೆಗೆ ಮತ್ತು ಸಮಾಜದ ಸುಧಾರಣೆಗೆ ಸಹಾಯಕವಾಗುತ್ತದೆ ಜೊತೆಗೆ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು
ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಸವದತ್ತಿ ಶಾಂತಿ ನಗರದಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಡಿಯಲ್ಲಿ “ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ”(ಐಟಿಐ ಕಾಲೇಜ) ಕಟ್ಟಡ ನಿರ್ಮಾಣ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಶಾಸಕ ವಿಶ್ವಾಸ ವೈದ್ಯ ಅವರು ಭಾಗಿಯಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ನಾಯಕರು, ಗ್ರಾಮ ಸದಸ್ಯರು ಉಪಸ್ಥಿತರಿದ್ದರು.